Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಯುಗಾದಿ ಹಬ್ಬದ ಪ್ರಯುಕ್ತ ksrtc ವಿಶೇಷ ಬಸ್ ಗಳ ವ್ಯವಸ್ಥೆ.!

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ.

ಏಪ್ರಿಲ್ 9ರಂದು ಮಂಗಳವಾರ ಯುಗಾದಿ ಹಬ್ಬ ಇರಲಿದೆ. ಶನಿವಾರ, ಭಾನುವಾರ ಹೇಗೂ ರಜೆಯಾದ್ದರಿಂದ ಸೋಮವಾರ ಒಂದು ದಿನ ರಜೆ ಮಾಡಿದರೆ 4 ದಿನ ರಜೆ ಸಿಕ್ಕಂತಾಗುತ್ತದೆ. ಮುಂದಿನ ವಾರ, ಏಪ್ರಿಲ್ 11 ರ ಗುರುವಾರ ಮುಸ್ಲಿಮರ ಹಬ್ಬ ರಂಜಾನ್ ಸಹ ಇರಲಿದೆ. ಮತ್ತೆ ದೀರ್ಘ ವಾರಾಂತ್ಯ ರಜೆ ಸಿಗಲಿದೆ. 13 ರಂದು ಎರಡನೇ ಶನಿವಾರ ರಜೆ ಹಾಗೂ14 ರಂದು ಭಾನುವಾರ ರಜೆ‌ ಇದೆ. ಈ ಎಲ್ಲ ಕಾರಣಗಳನ್ನು ಮತ್ತು ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್ ನಿಯೋಜನೆ ಮಾಡಿದೆ.

ಕೆಎಸ್‌ಆರ್‌ಟಿಸಿಯಿಂದ 1,750ಬಸ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 145 ಬಸ್, ಕೆಕೆಆರ್‌ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳು ಸಂಚಾರ ಮಾಡಲಿವೆ. ಒಟ್ಟು ನಾಲ್ಕು ನಿಗಮಗಳಿಂದ 2,275 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​​ಆರ್​ಟಿಸಿ ಈ ಕ್ರಮಕ್ಕೆ ಮುಂದಾಗಿದೆ.!