Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು- ಇಬ್ಬರಿಗೆ ಗಾಯ

ಕಲಬುರಗಿ: ರಸ್ತೆ ಮಧ್ಯೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿದ್ದರಿಂದ ಬೆಂಕಿ ಹತ್ತಿರುವ ಘಟನೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರದ ಹಲಕಟ್ಟಾದಲ್ಲಿ ಭಾನುವಾರ ನಡೆದಿದೆ.

ಯಾದಗಿರಿಯಿಂದ ಕಲಬುರಗಿಗೆ ಬರುವಾಗ ರಸ್ತೆ ಮಧ್ಯೆ ಈ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರಿಗೆ ಬೆಂಕಿ ತಗುಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ‌ ವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.