Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಬಿಸಿಲಿನಿಂದ ಬಸವಳಿದ ರಾಜ್ಯದ ಜನತೆಗೆ ಗುಡ್‌ನ್ಯೂಸ್‌. ಮುಂದಿನ 4 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 ದಿನಗಳವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾದರೆ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಉ.ಕನ್ನಡ, ದ.ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ದಾವಣಗೆರೆಯ ವಿವಿಧೆಡೆ ಮಳೆರಾಯ ನಿನ್ನೆ ತಂಪೆರೆದಿದ್ದಾನೆ.