Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದ ಹಲವೆಡೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಜಯಪುರ, ಅಜ್ಜಂಪುರ, ನಾಯಕನಹಟ್ಟಿ, ಹೊಸದುರ್ಗ, ಕಡೂರು, ಕೊಟ್ಟಿಗೆಹಾರ, ಎನ್​ಆರ್​ಪುರ, ತರೀಕೆರೆ, ಯುಗಟಿ, ಬೇಲೂರು, ಮೂರ್ನಾಡು, ಹುಂಚದಕಟ್ಟೆ, ಮಂಗಳೂರು ವಿಮಾನ ನಿಲ್ದಾಣ, ಭಾಗಮಂಡಲ, ವೈ.ಎನ್. ಹೊಸಕೋಟೆ, ಸಿರಾ, ಬಾಳೆಹೊನ್ನೂರು, ಸಕಲೇಶಪುರದಲ್ಲಿ ಮಳೆಯಾಗಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಕಾಣಿಸಿಕೊಂಡಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.