Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದ 58 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ದಾಖಲೆ ಪರಿಶೀಲನೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಪಾಲಿಕೆ ಮುಖ್ಯ ಎಂಜಿನಿಯರ್‌ ರಂಗನಾಥ್‌ಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ರಾಜ್ಯದ 58 ಕಡೆಗಳಲ್ಲಿ 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿ 25 ಪಿಐ ಸೇರಿದಂತೆ 130 ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಆಂಥೋನಿ ಜಾನ್ ಮರ್ಗಾದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಎಂ.ಎನ್.ಓಲೇಕಾರ ನೇತೃತ್ವದಲ್ಲಿ ಈ ದಾಳಿಯನ್ನು ದಾಳಿ ಮಾಡಲಾಗಿದೆ.

ಅಕ್ರಮ ಆಸ್ತಿ ಗಳಿಕೆ ದೂರು ಬಂದ ಹಿನ್ನೆಲೆಯಲ್ಲಿ  ಗಡಿ ಜಿಲ್ಲೆ ಬೀದರ್‌ನಲ್ಲಿ‌‌ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಏಕಕಾಲಕ್ಕೆ ಬೀದರ್‌ನಲ್ಲಿ ಮೂರು ಕಡೆ ಹಾಗೂ ಕಲಬುರಗಿಯಲ್ಲಿ ಒಂದು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕಾರಂಜಾ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವಕುಮಾರ ಸ್ವಾಮಿಯ ನಿವಾಸಗಳು ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೀದರ್ ನಗರದ ವೀರಭದ್ರೇಶ್ವರ ಕಾಲೋನಿಯ ನಿವಾಸ, ಭಾಲ್ಕಿ ತಾಲೂಕಿನ ನಾಗೂರು ಗ್ರಾಮದ ನಿವಾಸ, ಬೀದರ್ ನಗರದ ಕಾರಂಜಾ ಕಚೇರಿ ಹಾಗೂ ಕಲಬುರಗಿಯ ಹಳೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಭಾಲ್ಕಿಯ ಕಾರಂಜಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವತ್ತಿರುವ ಶಿವಕುಮಾರ್ ಸ್ವಾಮಿ ನಿವಾಸಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.