Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಮತ್ತಿಬ್ಬರು ಶಂಕಿತ ಆರೋಪಿಗಳು ‘NIA’ ವಶಕ್ಕೆ.!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಶಂಕಿತ ಆರೋಪಿಗನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತ ಆರೋಪಿಗನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ಹಲವರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಮಾಜ್ ಮುನೀರ್ ಕೃತ್ಯ ಧೃಡವಾಗಿದ್ದು, ಈತನೇ ಪ್ರಕರಣದ ಎ 1 ಆರೋಪಿಯಾಗಿದ್ದಾನೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 9 ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನ ಕೆಫೆ ಆರಂಭವಾಗಿತ್ತು.