Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿಯ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಬಂಧಿತ ಆರೋಪಿ.

ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಸಂಚುಕೋರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಎನ್​ಐಎ ಆರೋಪಿಯನ್ನು ಬಂಧಿಸಿರುವುದಾಗಿ ಖಚಿತಪಡಿಸಿದೆ.

ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿತ್ತು. ದಾಳಿಯ ಬಳಿಕ ಆರೋಪಿ ಮುಜಾಮಿಲ್​ ಶರೀಫ್​ ನನ್ನು ಬಂಧಿಸಿರುವುದಾಗಿ ಎನ್‌ಐಎ ಟ್ವೀಟ್​ ಮಾಡಿದೆ.

ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್​ ಶರೀಫ್​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತನಿಖೆಯ ಮೂಲಕ ತಿಳಿದುಬಂದಿದೆ. ಇನ್ನು ಆರೋಪಿಯ ಬಳಿ ಇದ್ದ ವಿವಿಧ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್​ಐಎ ತಿಳಿಸಿದೆ.