Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರೌಡಿಗಳ ಹಾವಳಿಗೆ ಕಡಿವಾಣ, ಸೈಬರ್ ಅಪರಾಧ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಡಾ. ಜಿ. ಪರಮೇಶ್ವರ್

 

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಸೈಬರ್ ಕ್ರೈಂ ಬಗ್ಗೆ ಜನಜಾಗೃತಿ ಮೂಡಿಸಿ ಅಪರಾಧ ತಡೆಗಟ್ಟಬೇಕು ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ಸರ್ಕಾರದ ಗುರಿಯಾಗಿದೆ. ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣವಾಗಿ ಮಟ್ಟ ಹಾಕಬೇಕು. ಈ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿ ಮಾದರಿಯಾಗಿ ಹೊರ ಹೊಮ್ಮಬೇಕು.  ಪೆಡ್ಲರ್‍ಗಳು ಹೊರ ರಾಜ್ಯಗಳಿಂದ ವಿವಿಧ ಬಗೆಯ ಡ್ರಗ್ಸ್ ಸರಬರಾಜು ಮಾಡುತ್ತಿರುತ್ತಾರೆ.  ಈ ಕುರಿತಂತೆ ಚಲನವಲನಗಳ ಮೇಲೆ ಸೂಕ್ಷ್ಮವಾಗಿ ನಿಗಾವಹಿಸಬೇಕು. ಹೊರ ರಾಜ್ಯದ ಗಡಿಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಬೇಕು. ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ಚಟಗಳಿಗೆ ಮಾರು ಹೋಗುತ್ತಿದ್ದು, ಅವರ ಚಟುವಟಿಕೆಗಳ ಮೇಲೆ ನಿಗಾವಹಿಸುವುದು ಅಗತ್ಯ. ಡ್ರಗ್ಸ್ ಸೇವಿಸುವವರು ಅಥವಾ ಪೂರೈಕೆ ಮಾಡುವವರು ಸಿಕ್ಕಿಬಿದ್ದರೆ, ಮೂಲ ಆರೋಪಿಯನ್ನು ಪತ್ತೆ ಹಚ್ಚುವವರೆಗೂ ತನಿಖೆ ಕೈಗೊಳ್ಳಬೇಕು. ಡ್ರಗ್ಸ್ ಸೇವನೆ ತಪ್ಪು, ಅದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ  ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಮನೆ ಕಳ್ಳತನ, ಸುಲಿಗೆ, ದರೋಡೆ ಪ್ರಕರಣಗಳನ್ನು ಮಟ್ಟ ಹಾಕಲು, ಆರೋಪಿಗಳ ಚಲವಲನದ ಮೇಲೆ ನಿಗಾವಹಿಸಲು ಪೆÇಲೀಸರ ಗಸ್ತು ತಿರುಗುವುದು ಹೆಚ್ಚಾಗಬೇಕು. ಠಾಣೆಗಳಲ್ಲಿ ಹೆಲ್ಪಿಂಗ್ ಡೆಸ್ಕ್, ಸಿ.ಸಿ ಕ್ಯಾಮರಾ ಇರಬೇಕು. ದೂರು ನೀಡಲು ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಪೊಲೀಸ್ ಅಧಿಕಾರಿಗಳು ತಾಳ್ಮೆವಹಿಸಿ ಆಲಿಸಬೇಕು. ಠಾಣೆಗಳಲ್ಲಿ ಜನರ ದೂರುಗಳಿಗೆ, ಸ್ಪಂದಿಸುವ ಕಾರ್ಯವಾಗಬೇಕು, ಒಟ್ಟಾರೆ ಪೊಲೀಸ್ ಠಾಣೆಗಳಲ್ಲಿ ‘ಜನಸ್ನೇಹಿ ಪೆÇಲೀಸ್’ ವಾತಾವರಣ ನಿರ್ಮಾಣ ಮಾಡಬೇಕು ಎಂದರು.