Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲೋಕಸಭಾ ಚುನಾವಣೆ: ಕಾಂಗ್ರೆಸ್ ಪಕ್ಷ ರಾಜ್ಯದ 7 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ರಿಲೀಸ್.!

 

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು ರಾಜ್ಯದ 7 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಅಂತಿಮಗೊಳಿಸಿದೆ.