Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲೋಕಸಭಾ ಚುನಾವಣೆ ಪ್ರಚಾರ: ಇಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ದೇವೇಗೌಡರು ಸಾಥ್.!

 

ಬೆಂಗಳೂರು: ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಲಿದ್ದಾರೆ. ಹಳೇ ಮೈಸೂರು ಭಾಗದ NDA ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಮೋದಿಗೆ ಸಾಥ್ ನೀಡಲಿದ್ದಾರೆ.

ಮಂಗಳೂರಿಗೆ ಸಂಜೆ 7:45 ಕ್ಕೆ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಲಿದ್ದಾರೆ. ಮಹಾನಗರ ಪಾಲಿಕೆ ಮುಂಭಾಗದಿಂದ ಬಲ್ಲಾಳ ಬಾಗ್, ಎಂ.ಜಿ.ರಸ್ತೆಯಾಗಿ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ರಾಷ್ಟ್ರಕವಿ ಗೋವಿಂದ ಪೈ ಸರ್ಕಲ್ವರೆಗೆ ರೋಡ್ ಶೋ ಸಾಗಲಿದೆ. ರಾತ್ರಿ 8:30ರೊಳಗೆ ರೋಡ್ ಶೋ ಮುಗಿಯಲಿದೆ.