Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲೋಕಸಭೆಯಲ್ಲಿ ಭದ್ರತಾ ಲೋಪ: ಸಂಸತ್ ಭವನದ ರಕ್ಷಣೆಗಾಗಿ 140 ಸಿಐಎಸ್‌ಎಫ್ ನಿಯೋಜನೆ

ನವದೆಹಲಿ: ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಡೆದ ಸಂಸತ್ ಭದ್ರತೆ ಲೋಪವನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ ಜನವರಿ 31ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿನ ಸಂಪೂರ್ಣ ಭದ್ರತೆಯ ಜವಾಬ್ದಾರಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಗೆ ನೀಡಲು ಮುಂದಾಗಿದೆ.

2001ರಲ್ಲಿ ಸಂಸತ್ ಮೇಲೆ ಭಯೋತ್ಪಾದಕ ದಾಳಿ ನಡೆದ ಬಳಿಕವಂತೂ ಸಂಸತ್‌ ಭವನದ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಸೂಕ್ಷ್ಮ, ಸದೃಢ ಹಾಗೂ ತಂತ್ರಜ್ಞಾನ ಆಧಾರಿತರವಾಗಿ ಬದಲಾವಣೆ ಮಾಡಲಾಗಿತ್ತು. ಇಷ್ಟಾದರೂ 2033 ರ ಡಿ. ೧೩ ರಂದು ಕೆಲವರು ಲೋಕಸಭೆಗೆ ನುಗ್ಗಿ ಬಣ್ಣದ ಹೊಗೆ ಸಿಡಿಸಿಸಿ ದಾಂಧಲೆ ನಡೆಸಿದ ಘಟನೆ ನಡೆದಿತ್ತು.

ಇದೀಗ ಈ ನಿಟ್ಟಿನಲ್ಲಿ 140 ಸಿಐಎಸ್‌ಎಫ್ ಸಿಬ್ಬಂದಿಗಳನ್ನು ಸಂಸತ್ ಭವನದ ಸಂಕೀರ್ಣದ ಭದ್ರತೆಗೆ ನಿಯೋಜಿಸಲಾಗಿದ್ದು, ಅವರು ವೀಕ್ಷಕರು ಮತ್ತು ಅವರ ಲಗೇಜುಗಳನ್ನು ಪರಿಶೀಲಿಸುತ್ತಾರೆ ಮತ್ತು ಕಟ್ಟಡದ ಭದ್ರತೆಯ ಜವಾಬ್ದಾರಿಯನ್ನು ಸಹ ಹೊಂದಿರುತ್ತಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ಈ ಮೊದಲು ದೆಹಲಿ ಪೊಲೀಸ್ ಸಿಬ್ಬಂದಿ ಸಂಸತ್‌ ಸಂಕೀರ್ಣಕ್ಕೆ ಭೇಟಿ ನೀಡುವವರನ್ನು ತಪಾಸಣೆ ನಡೆಸುತ್ತಿದ್ದರು. ಆದರೆ ಇನ್ನು ಸಿಐಎಸ್‌ಎಫ್ ಸಿಬ್ಬಂದಿಗಳನ್ನು ಕರ್ತವ್ಯ ನಿರ್ವಹಿಸಲಿದ್ದಾರೆ. ಹೊಸ ತಂಡದಲ್ಲಿ ಅಗ್ನಿಶಾಮಕ ದಳದ 36 ಸಿಬ್ಬಂದಿ ಹಾಗೂ CISF ಸುಮಾರು 1.70 ಲಕ್ಷ ಸಿಬ್ಬಂದಿಯನ್ನು ಹೊಂದಿದೆ ಎಂದು ತಿಳಿದು ಬಂದಿದೆ.