ಸರ್ಕಾರಿ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ ಮಹಿಳಾ ಉದ್ಯೋಗಿ, ಎಫ್ಐಆರ್ ದಾಖಲು

ಬೆಂಗಳೂರು: ಸರ್ಕಾರಿ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರಲ್ಲದೆ ಜೀವ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಿ ಮಹಿಳಾ ಉದ್ಯೋಗಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನು ಮತ್ತು ಅಭಿಯೋಜನಾ ಇಲಾಖೆಯ ಕಾನೂನು ಅಧಿಕಾರಿ (ಹಿರಿಯ) ಕಚೇರಿಯ ಆಡಳಿತಾಧಿಕಾರಿ ನಾರಾಯಣಸ್ವಾಮಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳಾ ಉದ್ಯೋಗಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾನು ಈ ಹಿಂದೆ ದಾವಣಗೆರೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ವರ್ಷ ವಿವಿ ಟವರ್‌ನಲ್ಲಿರುವ ಬೆಂಗಳೂರು ನಗರ ವಿಭಾಗದ ಕಾನೂನು ಅಧಿಕಾರಿಗಳ (ಹಿರಿಯ) ಕಚೇರಿಗೆ … Continue reading ಸರ್ಕಾರಿ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ ಮಹಿಳಾ ಉದ್ಯೋಗಿ, ಎಫ್ಐಆರ್ ದಾಖಲು