Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು’- ಈಶ್ವರಪ್ಪ ಕಿಡಿ

ಮೈಸೂರು: ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು. ನಾನು ಐದು ವರ್ಷ ಸಿಎಂ ಅಂದರು. ಈಗ ವಿರೋಧ ವ್ಯಕ್ತವಾದಂತೆ ಉಲ್ಟಾ ಹೊಡೆದಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ. ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.

ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ. ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು.ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ ತರುವುದಾಗಿ ಹೇಳಿದ್ದರು. ಈಗ ಅದನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಸಾಧು ಸಂತರ ಶಾಪ ಸಿದ್ದರಾಮಯ್ಯಗೆ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತರು ಹಿಂದುಳಿದ ವರ್ಗದವರ ಶಾಪವು ತಟ್ಟುತ್ತದೆ. ಕೆಲವೇ, ದಿನಗಳಲ್ಲಿ ಕಾಂಗ್ರೆಸ್ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಅಪರೇಷನ್ ಕಮಲ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಬ್ಬನೇ ಒಬ್ಬ ಕಾಂಗ್ರೆಸ್ ಶಾಸಕ ನನಗೆ 50 ಕೋಟಿ ಆಫರ್ ಬಿಜೆಪಿಯಿಂದ ಆಫರ್ ಯಾರು ಕೊಟ್ಟರು ಎಂದು ಹೇಳಿ ಬಿಡಲಿ. ಆಗ ಅದನ್ನು ನಾನು ಒಪ್ಪಿಕೊಳ್ಳುತ್ತೇ ನೆ. ಸುಳ್ಳು ಹೇಳಿ ಇಂತಹವಿಚಾರ ಹಬ್ಬಿಸುವುದು ಬೇಡ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿ ಕೊಳ್ಳುತ್ತಿದ್ದಾರೆ ಸರ್ಕಾರ ಬೀಳುವ ದಿನಗಣನೆ ಸತೀಶ್ ಜಾರಕಿಹೊಳಿ, ಡಿ.ಕೆ ಶಿವಕುಮಾರ್, ಹರಿಪ್ರಸಾದ್,ಪರಮೇಶ್ವರ, ಪ್ರಿಯಾಂಕ ಖರ್ಗೆ ಎಲ್ಲಾ ಅಜಿತ್ ಪವಾರ್ ಗಳಾಗಿದ್ದಾರೆ. ಹೀಗಾಗಿ ಸರ್ಕಾರ ಬೀಳುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ನಲ್ಲಿ ಈಗ ಹಾದಿ ಬೀದಿಯಲ್ಲ ಹೋಗುವವರೆಲ್ಲಾ ಸಿಎಂ ಸ್ಥಾನ ಕೇಳುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರಿಯಾಂಕ ಖರ್ಗೆ ವಿರುದ್ಧ ಲೇವಡಿ ಮಾಡಿದರು.ಸ್ಥಾನ ಕೇಳಿದ್ದರೆ ಅಪ್ಪನಿಗೆ ಸಿಎಂ ಸ್ಥಾನ ಕೇಳಿದ್ದರೆ ಮೆಚ್ಚಿಕೊಳ್ಳುತ್ತಿದೆ. ಅವರೇ ಕೇಳುತ್ತಿದ್ದಾರೆ ಎಂದು ಹೇಳಿದರು.