Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಕಂಬಳದ ಕಂಪು.!

ಬೆಂಗಳೂರು: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದಿನಿಂದ ಕಂಬಳದ ಕಲರವ ಆರಂಭವಾಗಲಿದೆ.

ಇಂದಿನಿಂದ ಮೂರು ದಿನಗಳ ಕಾಲ ಕಂಬಳ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಆಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನ.25  ರ ನಾಳೆ ಸಂಜೆ 3:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ. 200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿದ್ದು, 157 ಮೀಟರ್ ಉದ್ದ, 8 ಮೀಟರ್ ಅಗಲದ ಕಂಬಳದ ಜೋಡು ಕೆರೆಗೆ ರಾಜಮಹಾರಾಜ ಹೆಸರು ಇಡಲಾಗಿದೆ. ಮುಖ್ಯ ವೇದಿಕೆಗೆ ಪುನೀತ್ ರಾಜಕುಮಾರ್ ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲಾಗಿದೆ. ಕಂಬಳ ವೀಕ್ಷಣೆಗೆ 6 ರಿಂದ 7 ಲಕ್ಷ ಜನ ಬರುವ ಸಾಧ್ಯತೆ ಇದೆ. 228 ಕೋಣಗಳ ಜೋಡಿ ರಿಜಿಸ್ಟ್ರೇಷನ್ ಆಗಿದ್ದು, 200 ಕೋಣಗಳನ್ನು ಅಂತಿಮಗೊಳಿಸಲಾಗಿದೆ.