Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಲಾಲ್‌ ಉತ್ಪನ್ನಗಳ ಮಾರಾಟಕ್ಕೆ ನಿಷೇಧ- ಉತ್ತರ ಪ್ರದೇಶ ಸರ್ಕಾರದಿಂದ ಆದೇಶ

ಲಖನೌ: ಕರ್ನಾಟಕದಲ್ಲಿ ಕೆಲ ತಿಂಗಳ ಹಿಂದೆ ಹಲಾಲ್‌ ಕಟ್‌ ಮಾಂಸದ ಪ್ರಕರಣವು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಹಲಾಲ್‌ ಕಟ್‌, ಜಟ್ಕಾ ಕಟ್‌ ಪ್ರಕರಣವು ಚರ್ಚೆಗೆ ಗ್ರಾಸವಾಗಿತ್ತು.

ಇದು ಚುನಾವಣೆ ವಿಷಯವಾಗಿಯೂ ಮಾರ್ಪಾಡಾಗಿತ್ತು. ಹೀಗೆ ಹಲಾಲ್‌ ಕಟ್ ವಿಷಯವು ಪರ-ವಿರೋಧ ಚರ್ಚೆಗಳು ಆಗಾಗ ಕೇಳಿಬರುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ.

ಉತ್ತರ ಪ್ರದೇಶದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಇದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ.

ಜನರ ಆರೋಗ್ಯದ ದೃಷ್ಟಿಯಿಂದ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ಉಲ್ಲೇಖಿಸಿದೆ.
ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳು, ಔಷಧಗಳು ಸೇರಿ ಯಾವುದೇ ವಸ್ತುಗಳ ಉತ್ಪಾದನೆ, ಸಂಗ್ರಹ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಔಷಧಗಳ ಮೇಲೆ ನಕಲಿ ಪ್ರಮಾಣಪತ್ರ ಅಂಟಿಸಿ ಹಲಾಲ್‌ ಪ್ರಮಾಣೀಕೃತ ಔಷಧಗಳನ್ನು ಮಾರಾಟ ಮಾಡಲಾಗುತ್ತಿದೆ. ಇದೊಂದು ದೊಡ್ಡ ಅಕ್ರಮ ಎಂಬ ಆರೋಪಗಳು ಕೇಳಿಬಂದಿದ್ದವು. ಇದೇ ಕಾರಣಕ್ಕಾಗಿ ಯೋಗಿ ಆದಿತ್ಯನಾಥ್‌ ಸರ್ಕಾರವು ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.ಅಲ್ಲದೆ, ಕೆಲ ಕಂಪನಿಗಳ ವಿರುದ್ಧ ನಕಲಿ ಪ್ರಮಾಣಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ ಐ ಆರ್‌ ಕೂಡ ದಾಖಲಾಗಿದೆ.