Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಿಂದೂ ಮತ ಬೇಡ ಎನ್ನುವ ಸುಳ್ಳು ಸುದ್ದಿ ಪೋಸ್ಟ್; 7 ಜನರ ವಿರುದ್ಧ ದೂರು ದಾಖಲು

ಬೆಂಗಳೂರು: ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಏಳು ಜನರ ವಿರುದ್ಧ ದೂರು ದಾಖಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, “ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ” ಎಂದಿದ್ದಾರೆ.

“ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ” ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿತ್ತು.