Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೊಳಲ್ಕೆರೆ ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

 

ಚಿತ್ರದುರ್ಗ: ಹೊಳಲ್ಕೆರೆ ಪುರಸಭಾ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಇತರೆ ಬಡ ಜನಂಗದವರಿಗೆ ಮತ್ತು ವಿಶೇಷಚೇತನರಿಗೆ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಜಿಲ್ಲಾಧಿಕಾರಿಗಳ ನೀಡಿರುವ ಅನುಮೋದನೆಯಂತೆ 2023-24ನೇ ಎಸ್.ಎಫ್.ಸಿ ಮುಕ್ತನಿಧಿ ಅನುದಾನದಲ್ಲಿ ಯೋಜನೆ, ಶೇ.7.25 ಯೋಜನೆ, ಶೇ.5 ರ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 31 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಹೊಳಲ್ಕೆರೆ ಪುರಸಭಾ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ ಹಾಗೂ ಹೊಳಲ್ಕೆರೆ ಪುರಸಭೆಯ ಅಧಿಕೃತ ಅಂತರ್ಜಾಲ ತಾಣ http://www.holalkeretown.mrc.gov.in  ರಲ್ಲಿ ನೋಟಿಫಿಕೇಷನ್ ವಿಭಾಗದಲ್ಲಿ ಸಹ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.