Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ! ರೂ 1,750 ಮಾಸಿಕ ಶಿಷ್ಯವೇತನ

2024-25 ನೇ ಸಾಲಿಗೆ ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ(10 months horticulture training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ ಮತ್ತು ಅರ್ಥಿಕವಾಗಿ ಉತ್ತಮ ಬೇಸಾಯ ಕ್ರಮಗಳ ಕುರಿತು ತರಬೇತಿಯನ್ನು ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ತಾಂತ್ರಿಕ ತರಬೇತಿ ನೀಡಲು ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಈ ತರಬೇತಿ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ತರಬೇತಿ ನಡೆಯುವ ಅವಧಿ:

ಈ ತರಬೇತಿಯು 02 ಮೇ 2024 ರಿಂದ ಪ್ರಾರ‍ಂಭವಾಗಿ 28 ಮೇ  2025 ರವರೆಗೆ ನಡೆಯಲಿದ್ದು ಒಟ್ಟು 10 ತಿಂಗಳ ಅವಧಿಯ ತರಬೇತಿ ಇದಾಗಿರುತ್ತದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ: 

ಕನ್ನಡ ವಿಷಯಗಳೊಂದಿಗೆ ಎಸ್‍ಎಸ್‍ಎಲ್‍ಸಿ ಉತ್ತಿರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ವಯೋಮಿತಿ:

1) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ: ಕನಿಷ್ಟ 18 ವರ್ಷ ಮತ್ತು ಗರಿಷ್ಠ 33 ವರ್ಷ 2) ಮಾಜಿ ಸೈನಿಕರಿಗೆ: 33 ರಿಂದ 65 ವರ್ಷ 3) ಇತರೆ ವರ್ಗದವರಿಗೆ:18 ವರ್ಷ ರಿಂದ ಗರಿಷ್ಠ 30 ವರ್ಷ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಈ ತರಬೇತಿಯನ್ನು ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಅರ್ಜಿಗಳನ್ನು, ತೋಟಗಾರಿಕೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ ಧಾರವಾಡ ಕಛೇರಿಯಲ್ಲಿ ಸಲ್ಲಿಸಬೇಕು.

ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 30 ಮತ್ತು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ (ಐಪಿಓ) ಅಥವಾ ಬ್ಯಾಂಕ್ ಡಿಮ್ಯಾಂಡ್ ಡ್ರಾಪ್ಟ್‍ನ್ನು ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಅವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಅರ್ಜಿ ಶುಲ್ಕದ ಬಾಬತ್ತು ಲಗತ್ತಿಸಬೇಕು.

ಅರ್ಜಿ ಫಾರಂಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್  https://horticulturedir.karnataka.gov.in ನಲ್ಲಿ 01 ಮಾರ್ಚ 2024 ರಿಂದ 30 ಮಾರ್ಚ 2024 ರವರೆಗೆ ಡೌನ್‍ಲೋಡ್ ಮಾಡಿಕೊಳ್ಳಬಹುದು.

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 

ಭರ್ತಿ ಮಾಡಿದ ಅರ್ಜಿ ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ 01 ಎಪ್ರೀಲ್ 2024 ರ ಸಂಜೆ 5:30 ಗಂಟೆಯೊಳಗಾಗಿ ಸಲ್ಲಿಸಬೇಕು.

ಈ ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ 1,750 ಮಾಸಿಕ ಶಿಷ್ಯವೇತನ ನೀಡಲಾಗುತ್ತದೆ.

ತರಬೇತಿ ನಿಭಂದನೆಗಳು:

ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನಿ ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡಬೇಕು.

ಅಭ್ಯರ್ಥಿಯು ತಮ್ಮ ಸ್ವಂತ ತೋಟಗಳನ್ನು ಅಭಿವೃದ್ದಿಪಡಿಸಬೇಕೆಂಬ ಅಭಿಲಾಷೆಯುಳ್ಳವವರಿ ಆಧ್ಯತೆ ನೀಡಲಾಗುತ್ತದೆ.

ಈ ತರಬೇತಿಯ ಕಾಲಾವಧಿ 10 ತಿಂಗಳು ತರಬೇತಿಯು ದಿನಾಂಕ: 02 ಮೇ 2024 ರಿಂದ ಪ್ರಾರ‍ಂಭವಾಗಿ 28 ಮೇ  2025 ರವರೆಗೆ ನಡೆಯುತ್ತದೆ.

ತರಬೇತಿಯ ಅಂತ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೇಗಳನ್ನು ನಡೆಸಲಾಗುತ್ತದೆ. ಅಂತಿಮ ಪರೀಕ್ಷೆಗೆ ಕುಳಿತುಕೊಳ್ಳಲು ಶೇ 75 ರಷ್ಟು ಹಾಜರಾತಿ ಕಡ್ಡಾಯ( ವೈದ್ಯಕೀಯ ಆಧಾರದ ಮೇಲೆ ಗರಿಷ್ಟ 30 ದಿನಗಳ ವಿನಾಯಿತಿ ಪಡೆಯಬವುದು)