ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿಗೆ ಡ್ರಗ್ಸ್ ದಂಧೆಗಳು ಹೆಚ್ಚಾಗಿ ಕಾಣುತ್ತಿತ್ತು. ಇದನ್ನು ಹೆಡೆಮುರಿಕಟ್ಟಲು ಸಿಸಿಬಿ ಪೊಲೀಸರು ಕಳೆದ 15 ದಿನಗಳಿಂದ ಸತತವಾಗಿ ಕಾರ್ಯಚರಣೆ ಮಾಡಿ ಇಂದು (ಅ.27 ಶುಕ್ರವಾರ) 10 ಜನ ಡ್ರಗ್ಸ್ ಮಾರುತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಹೌದು, ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಡ್ರಗ್ ಜಾಲ ಪತ್ತೆ ಹಚ್ಚಿದ್ದಾರೆ. 15 ದಿನಗಳಿಂದ ಪೆಡ್ಲರ್ಗಳ ಚಟುವಟಿಕೆ ಬಗ್ಗೆ ಸಿಸಿಬಿ ಕಾರ್ಯಾಚರಣೆ ನಡೆಸಿದ್ದು, 8 ವಿದೇಶಿ ಡ್ರಗ್ ಪೆಡ್ಲರ್ಗಳು ಸೇರಿ 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 5.50 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಹಣ ಗಳಿಸಲು ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ.
ಕಾಡುಗೋಡಿ, K.R.ಪುರಂ, ಸೋಲದೇವನಹಳ್ಳಿ, HSR ಲೇಔಟ್, ವೈಟ್ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಬಂಧಿತರಿಂದ ಎಂಡಿಎಂಎ ಕ್ರಿಸ್ಟೆಲ್ 3,806 ಮಾತ್ರೆ, 50 ಗ್ರಾಂ ಕೊಕೆನ್, ಎಕ್ಸ್ಟಿಸಿ ಪಿಲ್ಸ್ 25, ಎಲ್ಎಸ್ಡಿ ಸ್ಟ್ರೀಪ್ಸ್ 50, 5 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ 1 ಕಾರು, 3 ಬೈಕ್, 9 ಮೊಬೈಲ್ ಜಪ್ತಿ ಮಾಡಲಾಗಿದೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.