Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

100 ಅಡಿ ಆಳದ ಕಮರಿಗೆ ಬಿದ್ದ ಪ್ರವಾಸಿ ಬಸ್ – 8 ಜನ ಸಾವು

ಚೆನ್ನೈ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ 100 ಅಡಿ ಆಳದ ಕಮರಿಗೆ ಬಿದ್ದಿದೆ. ಪರಿಣಾಮ ಕನಿಷ್ಟ ಎಂಟು ಜನ ಮೃತಪಟ್ಟಿದ್ದಾರೆ. ಹಾಗೂ ಸುಮಾರು 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಊಟಿಯಿಂದ ಮೆಟ್ಟುಪಾಳ್ಯಮ್‌ಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆಗೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕೊಯಮತ್ತೂರು ವಲಯದ ಡಿಐಜಿ ಸರವಣ ಸುಂದರ್ ಹೇಳಿದ್ದಾರೆ.