Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

15 ಮಂದಿ ಭಾರತೀಯರಿದ್ದ ಸರಕು ಸಾಗಣೆ ಹಡಗು ಸೋಮಾಲಿಯದಿಂದ ಹೈಜೆಕ್‌

ನವದೆಹಲಿ: 15 ಮಂದಿ ಭಾರತೀಯರಿದ್ದ ಸರಕು ಸಾಗಣೆ ಹಡಗನ್ನು ಸೊಮಾಲಿಯಾ ಬಳಿ  ಹೈಜೆಕ್‌ ಮಾಡಲಾಗಿದೆ.

ಸೋಮಾಲಿಯಾ ಕರಾವಳಿಯ ಬಳಿ ಗುರುವಾರ ಸಂಜೆ ‘MV LILA NORFOLK’ ಎಂಬ ಸರಕು ಸಾಗಣೆ ಹಡಗನ್ನು ಅಪಹರಿಸಲಾಗಿದ್ದು, ಭಾರತೀಯ ನೌಕಾಪಡೆಯು ಅದರತ್ತ ಯುದ್ಧನೌಕೆಯನ್ನು ಕಳುಹಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಹೆಚ್ಚುವರಿಯಾಗಿ, ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ.

ಅಪಹರಿಸಿದ ಹಡಗಿನಲ್ಲಿ 15 ಭಾರತೀಯರಿದ್ದು, ಸಿಬ್ಬಂದಿಯೊಂದಿಗೆ ಸಂವಹನವನ್ನು ಸ್ಥಾಪಿಸಲಾಗಿದೆ. ಸೇನಾ ಅಧಿಕಾರಿಗಳ ಪ್ರಕಾರ, ಸೊಮಾಲಿಯಾ ಕರಾವಳಿಯಲ್ಲಿ ಹಡಗನ್ನು ಅಪಹರಿಸಿರುವ ಬಗ್ಗೆ ಗುರುವಾರ ಸಂಜೆ ಮಾಹಿತಿ ಲಭಿಸಿದೆ. ಅಲ್ಲದೇ ಭಾರತೀಯ ನೌಕಾಪಡೆಯ ವಿಮಾನವು ಹಡಗಿನ ಮೇಲೆ ನಿಗಾ ಇರಿಸಿದೆ.