Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

ಹಲವು ಎಚ್ಚರಿಕೆಗಳ ಹೊರತಾಗಿಯೂ ಅಶ್ಲೀಲ ಮತ್ತು ಅಸಭ್ಯ ವಿಷಯವನ್ನು ಪ್ರದರ್ಶಿಸುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧಿಸಿದೆ.

ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಸಮನ್ವಯದೊಂದಿಗೆ ಸಚಿವಾಲಯವು 19 ವೆಬ್‌ಸೈಟ್‌ಗಳು, ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಏಳು ಮತ್ತು ಆಪಲ್‌ ಆಪ್‌ ಸ್ಟೋರ್‌ನಲ್ಲಿ ಮೂರು ಸೇರಿದಂತೆ 10 ಮೊಬೈಲ್‌ ಅಪ್ಲಿಕೇಶನ್‌ಗಳು ಮತ್ತು ಭಾರತದಲ್ಲಿ ಸಾರ್ವಜನಿಕ
ಪ್ರವೇಶಕ್ಕಾಗಿ ನಿರ್ಬಂಧಿಸಲಾದ ಪ್ಲಾಟ್‌ಫಾರ್ಮ್‌ಗಳಿಗೆ ಸಂಬಂಧಿಸಿದ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ.