Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

2 ವರ್ಷದ ಬಾಲಕ ಮೇಲೆ ಬೆಡ್ ಬಿದ್ದು ಸಾವು

ತಿರುವನಂತಪುರಂ: ಗಾಢ ನಿದ್ದೆಯಲ್ಲಿದ್ದ ಬಾಲಕ ಮೇಲೆ ಬೆಡ್ ಬಿದ್ದ ಪರಿಣಾಮ ಆತ ದುರ್ಮರಣಕ್ಕೀಡಾದ ದುರಂತ ಕೇರಳದ ಕೋಯಿಕ್ಕೋಡ್‍ನಲ್ಲಿ ನಡೆದಿದೆ.

ಮೃತನನ್ನು ಜೆಫಿನ್ ಸಂದೀಪ್ (2) ಎಂದು ಗುರುತಿಸಲಾಗಿದೆ. ಈತ ಸಂದೀಪ್ ಹಾಗೂ ಜಿನ್ಸಿ ದಂಪತಿಯ ಪುತ್ರ. ಈ ಘಟನೆ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಬಾಲಕ ಮಲಗಿ ಗಾಢ ನಿದ್ದೆಯಲಿದ್ದ ವೇಳೆ ರ್ಯಾಕ್‍ನಲ್ಲಿಟ್ಟ ಬೆಡ್ ಆತನ ಮೈಮೇಲೆ ಬಿದ್ದಿದೆ. ಬೆಡ್ ಬಾಲಕನ ಮೇಲೆ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಆತನ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಘಟನೆ ನಡೆದ ಸಂದರ್ಭದಲ್ಲಿ ಜೆಫಿನ್ ಹಾಗೂ ಆತನ ತಾಯಿ ಇಬ್ಬರೇ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಜೆಫಿನ್ ತಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕೆಲಸವೊಂದರ ನಿಮಿತ್ತ ಅವರು ಹೊರಗಡೆ ಹೋಗಿದ್ದರು ಎಂಬುದಾಗಿ ವರದಿಯಾಗಿದೆ.