Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

2028ರ ವೇಳೆ ಭಾರತೀಯ ಬಾಹ್ಯಾಕಾಶ ನಿಲ್ದಾಣ ನಿರ್ಮಾಣ

ಗಾಂಧಿನಗರ್: ಭಾರತದಲ್ಲಿ 2028ರ ವೇಳೆಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪಿಸುವುದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಗುರಿಯಾಗಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಅಸ್ತಿತ್ವದಲ್ಲಿರುವ ಲಾಂಚರ್ ಸಾಮರ್ಥ್ಯವನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸಲಾಗುತ್ತದೆ. ಹಾಗೂ ಮುಂದಿನ ದಿನಗಳಲ್ಲಿ ಪ್ರಯೋಗಗಳನ್ನು ನಡೆಸಲು ನಾವು ಅದನ್ನು ಪ್ರಯೋಗಾಲಯವಾಗಿ ಪರಿವರ್ತಿಸಲು ನಿರ್ಧರಿಸಿದ್ದೇವೆ. 2035 ರ ವೇಳೆಗೆ ಆ ಬಾಹ್ಯಾಕಾಶ ನಿಲ್ದಾಣಕ್ಕೆ ಮಾನವರನ್ನು ಕಳುಹಿಸಲಾಗುತ್ತದೆ. ಬಳಿಕ ಇಸ್ರೋ ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳನ್ನು ಮಾಡಬಹುದಾದ ಪ್ರಯೋಗಾಲಯಗಳನ್ನು, ಸಂಸ್ಥೆಗಳನ್ನು, ವೈಜ್ಞಾನಿಕ ಸಂಸ್ಥೆಗಳನ್ನು ಸ್ಥಾಪಿಸಲಿದೆ ಎಂದು ಹೇಳಿದರು.

ಬಾಹ್ಯಾಕಾಶ ನಿಲ್ದಾಣವು ಸ್ಥಾಪನೆಯಾದ ಬಳಿಕ ಆರ್ಥಿಕ ಚಟುವಟಿಕೆಗಳನ್ನು ಹಾಗೂ ಆವಿಷ್ಕಾರವನ್ನು ಹೆಚ್ಚಿಸುವ ಮೂಲಕ ಭಾರತೀಯ ಅಂತರಿಕ್ಷಾ ನಿಲ್ದಾಣದ ಬಳಕೆಯನ್ನು ಗರಿಷ್ಠಗೊಳಿಸಲು ಕಂಪನಿಗಳು ಮತ್ತು ಸಂಸ್ಥೆಗಳೊಂದಿಗೆ ಸಹಕರಿಸಲು ಇಸ್ರೋ ಯೋಜನೆ ರೂಪಿಸಿದೆ. ಇಂತಹ ಸಹಯೋಗಗಳ ಕಾರ್ಯಸಾಧ್ಯತೆಯ ಬಗ್ಗೆ ಸೋಮನಾಥ್ ಅವರು ವಿಶ್ವಾಸ ವ್ಯಕ್ತಪಡಿಸಿದರು.