Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

3 ರಾಜ್ಯಗಳಲ್ಲಿ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ

ದೆಹಲಿ: ಆಮ್ ಆದ್ಮಿ ಪಕ್ಷವು ಮೂರು ರಾಜ್ಯಗಳಲ್ಲಿ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಮೂಲಕ ಇಂಡಿಯಾ ಮೈತ್ರಿಕೂಟದ ಒತ್ತಡ ಮತ್ತಷ್ಟು ಹೆಚ್ಚಾಗಿದೆ.

ಆಮ್ ಆದ್ಮಿ ಪಕ್ಷವು ಲೋಕಸಭೆ ಚುನಾವಣೆಗೆ ಗುಜರಾತ್ ನಲ್ಲಿ 2 ಸ್ಥಾನಗಳಿಗೆ, ಗೋವಾದಲ್ಲಿ ಒಂದು ಸ್ಥಾನಕ್ಕೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಬ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ದೆಹಲಿಯಲ್ಲಿ 7 ಲೋಕಸಭಾ ಸ್ಥಾನಗಳ ಪೈಕಿ ಕೇವಲ 1 ಸ್ಥಾನವನ್ನು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವುದಾಗಿ ಆಮ್ ಆದ್ಮಿ ಪಕ್ಷ ತಿಳಿಸಿದೆ. ಹಾಗೂ ಈ ಒಂದು ಸ್ಥಾನಕ್ಕೂ ಕಾಂಗ್ರೆಸ್ ಪಕ್ಷ ಅರ್ಹವಿಲ್ಲ. ಆದರೆ ನಾವು ಮೈತ್ರಿ ಧರ್ಮ ಮೀರಬಾರದೆಂದು ಈ ಒಂದು ಸ್ಥಾನವನ್ನು ಕಾಂಗ್ರೆಸ್ ಗೆ ನೀಡುತ್ತಿದ್ದೇವೆ ಎಂದು ತಿಳಿಸಿದೆ.

ಇನ್ನು ಕಳೆದ ವಾರವಷ್ಟೇ ಆಮ್ ಆದ್ಮಿ ಪಕ್ಷವು ಅಸ್ಸಾಂನ ಗುವಾಹಟಿ, ಸೋನಿತ್‌ಪುರ ಹಾಗೂ ದಿಬ್ರುಗಢ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಏಕಪಕ್ಷೀಯವಾಗಿ ಘೋಷಿಸಿತ್ತು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಅಭ್ಯರ್ಥಿಗಳ ಅರ್ಹತೆ ಹಾಗೂ ಗೆಲುವಿನ ಆಧಾರದ ಮೇಲೆ ಗೋವಾ, ಗುಜರಾತ್ ಮತ್ತು ಅಸ್ಸಾಂನಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ನಾಯಕ ಸಂದೀಪ್ ಪಾಠಕ್ ತಿಳಿಸಿದ್ದಾರೆ.