Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

4 ವರ್ಷಗಳ ನಂತರ ಸ್ವದೇಶಕ್ಕೆ ಬಂದಿಳಿದ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಮೂರು ಬಾರಿ ಪ್ರಧಾನಿ ಹುದ್ದೆಗೇರಿದ್ದ, ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಮುಖ್ಯಸ್ಥ ನವಾಜ್ ಷರೀಫ್, ನಾಲ್ಕು ವರ್ಷಗಳ ಬಳಿಕ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಜನವರಿ 2024 ರಲ್ಲಿ ನಡೆಯಲಿರುವ ಪಾಕ್ ಸಂಸತ್ತಿನ ಚುನಾವಣೆಗೆ ಮುಂಚಿತವಾಗಿ ತನ್ನ ಪಕ್ಷದ ಪ್ರಚಾರವನ್ನು ಪ್ರಾರಂಭಿಸಲು ನಂತರ ಶನಿವಾರ ದೇಶಕ್ಕೆ ಮರಳಿರುವುದು ಪಾಕ್ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ದೇಶದಿಂದ ಗಡೀಪಾರಾದ ನಂತರ ನವಾಜ್ ಷರೀಫ್ ಲಂಡನ್‌ನಲ್ಲಿ ನಾಲ್ಕು ವರ್ಷಗಳ ಕಳೆದಿದ್ದ ಅವರು ‘ಉಮೀದ್-ಎ-ಪಾಕಿಸ್ತಾನ’ ಚಾರ್ಟರ್ಡ್ ವಿಮಾನದಲ್ಲಿ ಇಸ್ಲಾಮಾಬಾದ್‌ಗೆ ಬಂದಿಳಿದಿದ್ದಾರೆ.

ಮಾಜಿ ಪ್ರಧಾನಿಗೆ ಅದ್ಧೂರಿ ಸ್ವಾಗತಕ್ಕೆ ಪಿಎಂಎಲ್-ಎನ್ ಪಕ್ಷ ಸಿದ್ಧತೆ ನಡೆಸಿದೆ. ಪಕ್ಷದ ಮಹಾಶಕ್ತಿ ಪ್ರದರ್ಶನಕ್ಕಾಗಿ ಹಲವಾರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪಾಕಿಸ್ತಾನದಾದ್ಯಂತ ಲಾಹೋರ್‌ಗೆ ಸೇರುತ್ತಿದ್ದಾರೆ. ತನ್ನ ಬೆಂಬಲಿಗರು ಮಿನಾರ್-ಎ-ಪಾಕಿಸ್ತಾನ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ವಿಶೇಷ ರೈಲುಗಳನ್ನು ಬುಕ್ ಮಾಡಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವಾಗ ವೈದ್ಯಕೀಯ ಚಿಕಿತ್ಸೆ ಪಡೆಯಲು 2019ರಲ್ಲಿ ಪಾಕಿಸ್ತಾನದಿಂದ ಲಂಡನ್‌ಗೆ ತೆರಳಿದ್ದರು. ಪಾಕಿಸ್ತಾನದಲ್ಲಿ ಪ್ರಸ್ತುತ ರಾಜಕೀಯ ಪ್ರಕ್ಷುಬ್ಧತೆ ಮತ್ತು ಅತ್ಯಂತ ಹಿಂತಿರುಗುವಿಕೆ ರಾಜಕೀಯವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ.