Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

40ನೇ ಮಹಡಿಯಿಂದ ನೆಲ ಮಾಳಿಗೆಗೆ ಕುಸಿದ ಲಿಫ್ಟ್ – 7 ಮಂದಿ ಮೃತ್ಯು

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ ಕುಸಿದ ಪರಿಣಾಮ 7 ಮಂದಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾಸ್ (38) ಮತ್ತು ಸುನೀಲ್ ಕುಮಾರ್ ದಾಸ್ (21) ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ.

ಇನ್ನು ಮೃತಪಟ್ಟವರೆಲ್ಲರೂ ಕಟ್ಟಡ ಕಾರ್ಮಿಕರಾಗಿದ್ದು ಲಿಫ್ಟ್‌ನಲ್ಲಿ ಇಳಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.