Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

68 ಸಾಧಕರು, 10 ಸಂಸ್ಥೆಗೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2023ನೇ ಸಾಲಿನ ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಈ ಬಾರಿ 68 ಸಾಧಕರು ಮತ್ತು 10 ಸಂಘ ಸಂಸ್ಥೆ ಆಯ್ಕೆಯಾಗಿದ್ದು ಮಂಗಳವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಈ ಬಾರಿ 68ನೇ ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಪ್ರಶಸ್ತಿಗೆ 68 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಎಂದು ನಾಮಕರಣ ಮಾಡಿ ಐವತ್ತು ವರ್ಷವಾಗಿರುವ ಸುವರ್ಣ ಸಂಭ್ರಮದ ನೆನಪಿನಲ್ಲಿ 10 ಸಂಘ ಸಂಸ್ಥೆಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಈ ಬಾರಿ 3,523 ಅರ್ಜಿ‌ ಹಾಗೂ ಒಟ್ಟು 26,555 ಶಿಫಾರಸು ಪತ್ರ ಬಂದಿದ್ದು, ಅಂತಿಮವಾಗಿ 68 ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.

ನ.1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.