Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ: ‌ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದಲ್ಲಿ ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.‌

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇಂದು‌ ನಾನು, ನೀರಾವರಿ ಸಚಿವ ಡಿಕೆ ಶಿವಕುಮಾರ್​ ಹಾಗೂ ಇತರ ಸಚಿವರು, ಸಂಸದರು ಮತ್ತು ಶಾಸಕರು ಕೃಷ್ಣೆಗೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಣೆ ಮಾಡಿದ್ದೇವೆ. ಡ್ಯಾಂ 519.60 ಮೀಟರ್ ಇದ್ದು, 519.55 ಮೀಟರ್ ನೀರು ಸಂಗ್ರಹವಿದೆ ಎಂದರು.

ರಾಜ್ಯದಲ್ಲಿ ಮಳೆ‌ ವಾಡಿಕೆಗಿಂತ ಕಡಿಮೆಯಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯದ ಬರ ಕುರಿತು ಚರ್ಚೆ ಮಾಡಲಾಗಿದೆ. ಜಂಟಿ‌ ಸರ್ವೆ ಮಾಡಲಾಗಿದೆ. 113 ತಾಲೂಗಳಲ್ಲಿ ಬರವಿದೆ. ಈ ಬಗ್ಗೆ ಸಪ್ಟೆಂಬರ್ 4 ರಂದು ಸಭೆ ನಡೆಯಲಿದೆ. ಸಭೆ ಬಳಿಕ ಎಷ್ಟು ತಾಲೂಕುಗಳಲ್ಲಿ ಬರ ಇದೆ ಎಂದು‌ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.

ಬರ ವಿಚರಾದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ‌ ಸಲ್ಲಿಕೆ ಮಾಡಿದ್ದೇನೆ. ಎನ್​ಡಿಆರ್​ಎಫ್​ ನಿಮಯ‌ದ ಪ್ರಕಾರ ಬರ ಪರಿಹಾರ ಸಿಗಲಿದೆ. ಎನ್​ಡಿಆರ್​ಎಫ್ ನಿಯಮ ಬದಲಾವಣೆಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ. ನೀರಾವರಿಗಾಗಿ ಬಜೆಟ್‌ನಲ್ಲಿ 21000 ಕೋಟಿ ರೂ. ಮೀಸಲು ‌ಇಡಲಾಗಿದೆ. ಭದ್ರಾ ಯೋಜನೆಗೆ 5300 ಕೋಟಿ ರೂ. ಕೇಂದ್ರದಿಂದ ಬರಬೇಕು. ಆದರೆ ಕೇಂದ್ರ ಸರ್ಕಾರ ಈವರೆಗೂ ಹಣ ನೀಡಿಲ್ಲ ಎಂದರು.