Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

  ಸೆ.15ರಂದು ಬೃಹತ್ ಉದ್ಯೋಗ ಮೇಳ

 

ದಾವಣಗೆರೆ;: ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಸೆ.15 ರಂದು ಬೆಳಗ್ಗೆ 9 ಗಂಟೆಗೆ  ಶಿವಮೊಗ್ಗದ ಸೈನ್ಸ್ ಫೀಲ್ಢ್‍ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಕಾಂ, ಬಿಸಿಎ, ಬಿಇ, ಬಿ.ಟೆಕ್, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 10 ರಿಂದ 15 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ (ಕೆ.ಎಸ್.ಡಿ.ಸಿ.) ಜಿಲ್ಲಾಡಳಿತ ಭವನ, ಶಿವಮೊಗ್ಗ ಹಾಗೂ ದೂ.8457825088, 9880005425, 0818225593 ಸಂಪರ್ಕಿಸಲು ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.