Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೇರಳ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಪೋಟ ಹಿನ್ನಲೆ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್‌ಗೆ ಸೂಚನೆ – ಡಾ.ಜಿ.ಪರಮೇಶ್ವರ್

ಮಂಗಳೂರು: ಕೇರಳ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಪೋಟ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಇರಲು ಸೂಚನೆ ನೀಡಲಾಗಿದೆ‌. ಈ ಬಗ್ಗೆ ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಸೂಚನೆ ನೀಡಲಾಗಿದೆ. ಅಲ್ಲದೆ ಕೇರಳ ಗಡಿ ಭಾಗದಲ್ಲಿ ಭದ್ರತೆ, ನಿಗಾ ಹೆಚ್ಚಿಸಲಾಗುವುದು ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ದಸರಾ ಸಂದರ್ಭದಲ್ಲಿ ಮೈಸೂರು, ಕೊಡಗು ಮಂಗಳೂರಿನಲ್ಲಿ ಬೆದರಿಕೆ ಹಿನ್ನೆಲೆಯಲ್ಲಿ ಈ ಮೂರೂ ಕಡೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.‌ ಅದಕ್ಕೆ ಏನು ಕ್ರಮ ಕೈಗೊಳ್ಳಬೇಕಿತ್ತೋ ಅದನ್ನು ತೆಗೆದುಕೊಂಡಿದ್ದೇವೆ ಎಂದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಷನಲ್, ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ನಲ್ಲಿ ಕೊಂಡೊಯ್ಯಲು ಕ್ರಮ ವಹಿಸುತ್ತಿದ್ದೇವೆ. ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ‌ ಎಂಬ ಪ್ರಶ್ನೆಗೆ ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು. ವಿಜಯನಗರ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು, ಅದನ್ನು ನಮ್ಮ ಎಸ್ಪಿ ಲೆವೆಲ್ ನಲ್ಲಿಯೇ ತನಿಖೆ ಮಾಡುತ್ತೇವೆ ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.