Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜನರಿಗೆ ಊಟ ಸಿಗದಿದ್ದರೂ ಪರವಾಗಿಲ್ಲ ನ್ಯಾಯ ಅತಿ ಮುಖ್ಯ: ಸ್ಪೀಕರ್‌ ಖಾದರ್‌

ಮಂಗಳೂರು: ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ. ಪೊಲೀಸರು ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಸ್ಫೀಕರ್‌ ಯು.ಟಿಖಾದರ್‌ ಹೇಳಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ನೂತನ ಬಜ್ಪೆ ಪೊಲೀಸ್ ಠಾಣೆ, ಮಂಗಳೂರು ಗ್ರಾಮಾಂತರ ಠಾಣೆ, ಸಿಎಆರ್ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಶಾಸಕ ಭರತ್ ಶೆಟ್ಟಿ ಭಾಗಿ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸ್ಪೀಕರ್​​ ಯು.ಟಿ.ಖಾದರ್, ಊಟ ಸಿಗದಿದ್ರು ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ ಎಂದರು.

ನ್ಯಾಯ ಕೊಡದೆ ತಮ್ಮ ಉದ್ದೇಶ ಎಂದು ಪೊಲೀಸರು ಕರ್ತವ್ಯ ನಿರ್ಹಹಿಸಬೇಕು. ಶೇ. 90 ಒಳ್ಳೆಯವರಿದ್ದು, ಹತ್ತು ಪರ್ಸೆಂಟ್ ಕೆಟ್ವವರಿದ್ರೆ ಈ ಶೇ 90 ಪೊಲೀಸರಿಗೆ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸರಿಯಾಗಿ ಕೆಲಸ ಮಾಡಿ. ಒಂದು ಠಾಣಾ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಇದ್ರೆ. ಆ ಲಿಮಿಟ್ಸ್ ನಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಎಂದು ಯು.ಟಿ.ಖಾದರ್ ಹೇಳಿದರು.