Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೀದರ್: ಮರಾಠ ಮೀಸಲಾತಿ ಕಿಚ್ಚಿಗೆ KSRTC ಬಸ್ ಗೆ ಬೆಂಕಿ

ಬೀದರ್: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆ.ಎಸ್.ಆರ್.ಟಿ.ಸಿ. ಬಸ್‌ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರಗಾದಲ್ಲಿ ಘಟನೆ ನಡೆದಿದೆ. ಬಸ್‌ನಲ್ಲಿದ್ದ 48 ಜನ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ಬಸ್ ತೆರಳುತ್ತಿತ್ತು. ಈ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ. ರಾತ್ರಿಯಿಂದಲೇ ಕರ್ನಾಟಕ -ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ. ವ್ಯವಸ್ತಾಪಕ ನಿರ್ದೇಶಕ ಎಂ. ರಾಚಪ್ಪ ತಿಳಿಸಿದ್ದಾರೆ.