Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಕರ್ನಾಟಕದಲ್ಲಿ ಕೃಷಿಭಾಗ್ಯ ಯೋಜನೆ ಮರುಚಾಲನೆಗೆ ನಿರ್ಧಾರ’ – ಸಿಎಂ ಸಿದ್ದರಾಮ್ಮಯ್ಯ

ಬೆಂಗಳೂರು: ಮನ್ಸೂನ್‌ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಅತ್ಯಂತ ಪ್ರಾಮುಖ್ಯವಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು “x” ನಲ್ಲಿ ಮಾಹಿತಿ ನೀಡಿರುವ ಅವರು, ಮನ್ಸೂನ್‌ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಅತ್ಯಂತ ಪ್ರಾಮುಖ್ಯವಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

ಇನ್ನು ಕೃಷಿಭಾಗ್ಯ ಯೋಜನೆಯಡಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ನೀರು ಸಂಗ್ರಹಣೆಗಾಗಿ ಕೃಷಿಹೊಂಡಗಳ ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿತಿನ್‌ ಹೊದಿಕೆ, ಹೊಂಡದಿಂದ ನೀರೆತ್ತಲು ಡೀಸೆಲ್‌ ಪಂಪ್‌ ಸೆಟ್‌, ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ ನಿರ್ಮಾಣಕ್ಕಾಗಿ ಸಹಾಯಧನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.