Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೊಸಪೇಟೆ ಸಂಘ-ಸಂಸ್ಥೆಗಳಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

 

ಹೊಸಪೇಟೆ:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಘ-ಸಂಸ್ಥೆಗಳಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನ, ಕಲೆ, ಸಾಹಿತ್ಯ, ಸಂಗೀತ, ಜಾನಪದ ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ತನ್ಮೂಲಕ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟು ಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸAಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸAಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು Sevasindhu.karnataka.gov.in ಮುಖಾಂತರ ಡಿಸೆಂಬರ್ 13ರ ವರೆಗೆ ಕಾಲಾವಕಾಶ ನೀಡಲಾಗಿದೆ.

ಸರ್ಕಾರದ ಆದೇಶದಂತೆ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್: www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ 08022279954, 9986837037, 8792662814, 8792662816, 08022213530 ಅನ್ನು ಹಾಗೂ ಆಯಾ ಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯೊಳಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.