Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸ್ವತಃ ಮುಖ್ಯ ಮಂತ್ರಿಗಳು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ನಿಮ್ಮ ಅಹವಾಲುಗಳನ್ನು ಸ್ವೀಕರಿಸುತ್ತಾರೆ.!

 

 

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು.

ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ.