Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ: ಕೆಲವೇ ಗಂಟೆಗಳಲ್ಲಿ ಫಲಿತಾಂಶ ಸ್ಪಷ್ಟ

ಹೈದರಾಬಾದ್: 4 ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ತೆಲಂಗಾಣ, ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ಛತ್ತೀಸ್‌ಗಢದಲ್ಲಿ ಬಿಜೆಪಿ ಮ್ಯಾಜಿಕ್​ ನಂಬರ್​ ದಾಟಿದೆ.

ತೆಲಂಗಾಣದಲ್ಲಿನ ವಿಧಾನಸಭಾ ಚುನಾವಣೆಯ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಕಾಂಗ್ರೆಸ್ (ಐಎನ್‌ಸಿ) ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ 66 ಸ್ಥಾನದಲ್ಲಿ ಕಾಂಗ್ರೆಸ್ ಆರಂಭಿಕ‌ ಮುನ್ನಡೆ ಸಾಧಿಸಿದರೆ ಬಿಆರ್ಎಸ್ 45 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ 3 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಇದು ಆರಂಭಿಕ ಮುನ್ನಡೆಯಾಗಿದ್ದು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಸ್ಪಷ್ಟವಾಗಲಿದೆ.

ಆಡಳಿತಾರೂಢ ಬಿಆರ್​ಎಸ್ ಕೂಡ ‘ಕೈ’ ಪಡೆಗೆ ತೀವ್ರ ಪೈಪೋಟಿ ನೀಡುತ್ತಿರುವ ಕಾರಣ ಪಕ್ಷದ ಶಾಸಕರನ್ನು ಇತರ ಪಕ್ಷಗಳು ಸೆಳೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್‌ಗೆ 70 ಸ್ಥಾನಗಳಿಗಿಂತ ಕಡಿಮೆಯಾದರೆ, ಗೆಲ್ಲುವ ಶಾಸಕರು ‘ಕೈ’ ತಪ್ಪದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.ಶಾಸಕರನ್ನು ಬೆಂಗಳೂರು ಅಥವಾ ಇನ್ನೊಂದು ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.