Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಡಿಸೆಂಬರ್ 6ಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಮನೆಯಲ್ಲಿ I.N.D.I.A ಸಭೆ

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಕಾವಿನ ನಡುವೆ ಡಿಸೆಂಬರ್ 6ರಂದು ಕಾಂಗ್ರೆಸ್ I.N.D.I.A ಬ್ಲಾಕ್‌ನ ಮುಂದಿನ ಸಭೆಯನ್ನು ಕರೆದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಲಿದೆ ಎಂದು ವರದಿಯಾಗಿದೆ. ಇಂಡಿಯಾ ಬಣದಲ್ಲಿ ಬಿಜೆಪಿ ವಿರುದ್ಧ 28 ಪಕ್ಷಗಳು ಒಗ್ಗೂಡಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದು ಈ ಬಣದ ಪ್ರಮುಖ ಗುರಿಯಾಗಿದೆ. ಸದ್ಯದ ಮಾಹಿತಿ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೆ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.