Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

 

ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1ರ ಅಲೇಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು 2024ರ ಜನವರಿ 10 ಕೊನೆಯ ದಿನವಾಗಿದ್ದು, ಆಸಕ್ತರು ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ಇ-ಮೇಲ್ [email protected] ಗೆ ಸಂಪರ್ಕಿಸಬಹುದಾಗಿದೆ ಎಂದು ವಿಜಯನಗರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಬಿ.ರಾಮಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.