Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲಾರಿ, ಟ್ರಕ್‌ಗಳಲ್ಲಿ ಎಸಿ, ಕ್ಯಾಬಿನ್ ಅಳವಡಿಕೆ : ಕೇಂದ್ರ ಸಾರಿಗೆ ಇಲಾಖೆ ನಿರ್ಧಾರ

ಹೊಸದಿಲ್ಲಿ: ಸರಕು ಸಾಗಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಟ್ರಕ್‌ಗಳ ಚಾಲಕರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸಾರಿಗೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಹೊಸ ಟ್ರಕ್‌ಗಳಲ್ಲಿ ಎಸಿ ಅಳವಡಿಕೆ ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಕೊನೆ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಸಾರಿಗೆ ಇಲಾಖೆ ಜಾರಿಗೊಳಿಸಿದ ಹೊಸ ಅಧಿಸೂಚನೆಯ ಪ್ರಕಾರ 2025ರ ಆಕ್ಟೋಬರ್ 1ರ ಒಳಗೆ ಎಲ್ಲಾ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್ ಇರಬೇಕು ಎಂದು ಆದೇಶಿಸಿದೆ.

ಸಾರಿಗೆ ಉದ್ಯಮದಲ್ಲಿ ಪ್ರಮುಖ ಪಾತ್ರ ವಹಿಸುವ ಟ್ರಕ್ ಚಾಲಕರ ಕೆಲಸವನ್ನು ಸುಗಮಗೊಳಿಸುವುದಕ್ಕಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ನಿರ್ಧಾರ ಕೈಗೊಂಡಿದೆ.

ದೇಶಾದಾದ್ಯಂತ ವಿವಿಧ ಕಡೆಗಳಲ್ಲಿ ಸಂಚರಿಸುವ ಟ್ರಕ್ ಚಾಲಕರು ವಿಪರೀತ ಶಾಖದ ಪರಿಸ್ಥಿತಿಗಳಲ್ಲಿಯೂ ನಿರಂತರ ಕೆಲಸ ಮಾಡಬೇಕಾಗುತ್ತದೆ. ಈ ಬಗ್ಗೆ ಸಚಿವ ಗಡ್ಕರಿ ವಿಷಾದಿಸಿದ್ದರು. ಆದರೆ ಕೇಂದ್ರ ಸಾರಿಗೆ ಇಲಾಖೆಯ ಈ ನಿರ್ಧಾರಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಇದು ವಾಹನ ನಿರ್ಮಾಣ ವೆಚ್ಚವನ್ನು ಹೆಚ್ಚಿಸುತ್ತದೆ ಎಂದು ಹಲವು ಉದ್ಯಮ ಸಂಸ್ಥೆಗಳು ಬೇಸರ ವ್ಯಕ್ತಪಡಿಸಿದೆ.