Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅವ್ಯವಸ್ಥೆಗಳ ಆಗರವಾದ ಶಬರಿಮಲೆ – ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ ಆಗುತ್ತಿರುವ ಭಕ್ತರು

ಕೊಚ್ಚಿ : ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡು ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾಗಿವೆ. ಮತ್ತೊಂದೆಡೆ ಅವ್ಯವಸ್ಥೆ ಪ್ರಶ್ನೆ ಮಾಡಿದ ಭಕ್ತರ ಮೇಲೆ ದೇಗುಲದ ಭದ್ರತಾ ಸಿಬ್ಬಂದಿ ಹಲ್ಲೆ ಮಾಡಿದ ಘಟನೆಗಳೂ ಕೂಡಾ ನಡೆದಿವೆ ಎನ್ನಲಾಗಿದೆ. ಅದರ ನಡುವೆಯೇ ನೀಲಕ್ಕಲ್‌ನಲ್ಲಿ ತಂದೆ ಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ವಾಹನದಲ್ಲಿ ತಂದೆಯನ್ನು ಹುಡುಕಿಕೊಡು ವಂತೆ ಕಣ್ಣೀರಿಟ್ಟು ಕೈ ಮುಗಿದು ಬೇಡಿಕೊಳ್ಳುತ್ತಿ ರುವ ವಿಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿ ನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ಈ ವಿಡಿಯೋ, ಯಾತ್ರೆ ನಿರ್ವಹಣೆ ಯಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಕಿಡಿಕಾರಿವೆ. ಹೈಕೋರ್ಟ್ ಕೂಡಾ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿವೆ.

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕಳೆದ ಕೆಲ ದಿನಗಳಿಂದ ಭಾರೀ ಪ್ರಮಾಣದ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಭಕ್ತರ ನಿರ್ವ ಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇಗುಲ ಮಂಡಳಿ ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಡಳಿತ ಮಂಡಳಿ ವೈಫಲ್ಯದಿಂದಾಗಿ ದೇವರ ದರ್ಶನಕ್ಕೆ ಭಕ್ತರು ಹಲವು ಗಂಟೆಗಳ ಕಾಲ ಅನ್ನ, ನೀರು ಇಲ್ಲದೇ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಜೊತೆಗೆ ಹಲವೆಡೆ ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪೊಲೀಸರು ಭಕ್ತರ ಮೇಲೆ ಹಲ್ಲೆ ನಡೆಸಿದ ಘಟನೆಗಳ ವಿಡಿಯೋ ಕೂಡಾ ಎಲ್ಲೆಡೆ ಹರಿ ದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿ ಹಲವು ರಾಜ್ಯ ಗಳ ಭಕ್ತರು ಪಂದಳಂನಿಂದಲೇ ಹಿಂದಿರುಗು ತ್ತಿದ್ದಾರೆ ಎಂದು ಹಲವು ವರದಿಗಳು ತಿಳಿಸಿವೆ. ಇದು ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ಕಾರಣವಾಗಿದ್ದು, ವಿಪಕ್ಷನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದರ ನಡುವೆಯೇ ಕೇರಳ ಹೈಕೋರ್ಟ್ ಸಹ ಕೇರಳ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚನೆ ನೀಡಿದೆ.