Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಟಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್!

 

ಉತ್ತರ ಪ್ರದೇಶ: ಅಸಭ್ಯ ಕಾಮೆಂಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಉತ್ತರಪ್ರದೇಶದ ರಾಂಪುರದ ಮಾಜಿ ಸಂಸದೆ ಜಯಪ್ರದಾ ಅವರಿಗೆ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಈ ಪ್ರಕರಣದ ಬಗ್ಗೆ ನಟಿ ತಮ್ಮ ಹೇಳಿಕೆ ನೀಡುವಂತೆ ತಿಳಿಸಲಾಗಿತ್ತು. ಆದರೆ ಅವರು ಬುಧವಾರ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಹೀಗಾಗಿ ಉತ್ತರ ಪ್ರದೇಶದ ನ್ಯಾಯಾಲಯವೊಂದು ನೋಟಿಸ್‌ ನೀಡಿದೆ. ಡಿಸೆಂಬರ್ 20ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮೋಹನ್ ಲಾಲ್ ವಿಷ್ಟೋಯ್ ತಿಳಿಸಿದ್ದಾರೆ.