Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚೀನಾದಲ್ಲಿ ಪ್ರಬಲ ಭೂಕಂಪ- ಕನಿಷ್ಠ 111 ಮಂದಿ ಮೃತ್ಯು, 200 ಕ್ಕೂ ಹೆಚ್ಚು ಮಂದಿಗೆ ಗಾಯ

ಬೀಜಿಂಗ್ : ಚೀನಾ ದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ. 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೊರಬಿದ್ದಿದೆ.

ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದರಿಂದ ಕಟ್ಟಡಗಳು ನೆಲಸಮಗೊಂಡಿದ್ದು ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು ಅವರನ್ನು ರಕ್ಷಣಾ ತಂಡದಿಂದ ಭರದ ಕಾರ್ಯಾ ಚರಣೆ ನಡೆಸುತ್ತಿದ್ದು ಇದುವರೆಗೂ ಸುಮಾರು ನೂರಕ್ಕೂ ಅಧಿಕ ಮಂದಿ ಸಾವನ್ನಪಿರುವ ಕುರಿತು ವರದಿಯಾಗಿದೆ

ಅಲ್ಲದೆ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಅನೇಕ ಕಟ್ಟಡಗಳು ಕುಸಿದು ಬಿದ್ದಿದ್ದರಿಂದ ಜನರು ಅವಶೇಷಗಳಡಿಯಲ್ಲಿ ಹೂತು ಹೋಗಿದ್ದು, ರಕ್ಷಣಾ ತಂಡಗಳು ಅವರನ್ನು ರಕ್ಷಿಸುವಲ್ಲಿ ನಿರತವಾಗಿವೆ. ಸತ್ತವರ ಮತ್ತು ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ಭೂಕಂಪದ ಕೇಂದ್ರಬಿಂದು ವು 35.7 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 102.79 ಡಿಗ್ರಿ ಪೂರ್ವ ರೇಖಾಂಶದಲ್ಲಿ 10 ಕಿಲೋಮೀಟರ್
ಆಳದಲ್ಲಿ ದಾಖಲಾಗಿದೆ ಎಂದು ಮಾಹಿತಿ ಸಿಕ್ಕಿದೆ.

ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಲ್ಲಿ ಸಾಗುತ್ತಿದ್ದು ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಹೆಚ್ಚಿನ ಸೇವೆಗಳಿಗಳಿಗಿ ಸಿಬಂದಿಗಳನ್ನು ನೇಮಿಸಲಾಗಿದೆ ಎಂದು ಹೇಳಲಾಗಿದೆ.ಚೀನಾದಲ್ಲಿ ಭೂಕಂಪನ ಸಂಭವಿಸುವ ಮುನ್ನ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು ಎಂದು ಮೂಲಗಳು ತಿಳಿಸಿವೆ.