Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತಮಿಳು ಖ್ಯಾತ ನಟ, ರಾಜಕಾರಣಿ ವಿಜಯ್ ಕಾಂತ್ ವಿಧಿವಶ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ದೇಸಿಯಾ ಮುರ್ಪೊಕ್ಕು ದ್ರಾವಿಡಾ ಕಝಾಗಮ್ (DMDK) ಅಧ್ಯಕ್ಷ ಕ್ಯಾಪ್ಟನ್ ವಿಜಯ್ ಕಾಂತ್ ಇಂದು (ಗುರುವಾರ) ನಿಧನ ಹೊಂದಿದ್ದಾರೆ. ಕ್ಯಾಪ್ಟನ್ ವಿಜಯ್ ಕಾಂತ್ ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.