Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆಎಸ್‌ಆರ್‌ಟಿಸಿ ಅಪಘಾತ ಪರಿಹಾರ ಮೊತ್ತ 3ರಿಂದ 10 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ನೀಡುತ್ತಿದ್ದ ಪರಿಹಾರಧನವನ್ನು ಕೆಎಸ್‌ಆರ್‌ಟಿಸಿ ಹೆಚ್ಚಿಸಿದೆ. ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ರೂ.3,00,000 ದಿಂದ ಹತ್ತು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಆದೇಶ 2024ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಕ.ರಾ.ರ.ಸಾ ನಿಗಮ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ಸುತ್ತೋಲೆ ಹೊರಡಿಸಿದ್ದು, ಅಪಘಾತಕ್ಕೀಡಾದವರ ಕುಟುಂಬಸ್ಥರಿಗೆ ಹೆಚ್ಚುವರಿ ಪರಿಹಾರ ನೀಡಲು, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 50 ರಿಂದ 99 ರೂಪಾಯಿಗಳ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ 1 ರೂ. ಸಂಗ್ರಹಿಸಲಾಗುತ್ತದೆ. ಇದರ ಜೊತೆಗೆ 100 ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದ ಪ್ರಯಾಣಿಕರಿಂದ 2 ರೂ.ಗಳನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ಆದರೆ ಈ ಹಿಂದೆ, 100 ರೂ. ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ ಕೇವಲ 1 ರೂ ಮೊತ್ತವನ್ನು ಪರಿಹಾರ ನಿಧಿಗೆ ಸಂಗ್ರಹಿಸಲಾಗುತ್ತಿತ್ತು. ಇನ್ನು ರೂ. 1 ರಿಂದ ರೂ 49 ರ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ ಯಾವುದೇ ಅಪಘಾತ ಪರಿಹಾರ ನಿಧಿಯ ಕೊಡುಗೆಯನ್ನು ಸಂಗ್ರಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.