Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವು

ಬೆಂಗಳೂರು: ರಾಜ್ಯದಲ್ಲಿ ವಖ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾ ಲಯದಲ್ಲಿ ಜಿಲ್ಲಾ ವಖ್ಫ್ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲಾವಾರು ವಖ್ಫ್ ಆಸ್ತಿಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ವಖ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆ ಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆ ಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯ ದಲ್ಲಿರುವ ಪ್ರಕರಣ ಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯ ಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿ ದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ, ವರ್ತನೆ ಸರಿ ಪಡಿಸಿಕೊಳ್ಳ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಣ ಮಾಡಲು ವಖ್ಫ್ ಇಲಾಖೆಗೆ ಬರಬೇಡಿ.ಇದು ದೇವರ ಕೆಲಸ ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಖ್ಫ್ ಅಸ್ತಿಗಳ ರಕ್ಷಣೆ ಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಖ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕ ರೂಪದ ಕಾಪೌಂಡ್ ಹಾಕಬೇಕು. ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು