Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹುದ್ದೆಯ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ

 

ಹೊಸಪೇಟೆ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿಜಯನಗರ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಜಿಲ್ಲಾ ಸಂಯೋಜಕರು (ಆರ್.ಕೆ.ಎಸ್.ಕೆ) ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನಿಸಲಾಗಿದೆ.

ಈ ಹುದ್ದೆಯ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರು ಆಕ್ಷಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜ.12ರ ಸಂಜೆ 5.30 ರೊಳಗಾಗಿ ಕಚೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷ ಡಾ. ಎಲ್.ಆರ್.ಶಂಕರ್ ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.