Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

 

   ದಾವಣಗೆರೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿರುವ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ವೆಬ್‍ಸೈಟ್ https://dom.karnataka.gov.in ನಲ್ಲಿ ಅರ್ಜಿ ಸಲ್ಲಿಸಿ ಹಾಗೂ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ. ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜ.20 ಕೊನೆಯದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,# 44, ಎ ಬ್ಲಾಕ್ , 2ನೇ ಮಹಡಿ,  ಜಿಲ್ಲಾ ಆಡಳಿತ  ಭವನ , ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ- 08192-250022 ಸಂಪರ್ಕಿಸಲು  ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.