Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗೃಹಲಕ್ಷ್ಮಿ 5ನೇ ಕಂತಿನ ಹಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್…!

ಗೃಹಿಣಿಯರು 5ನೇ ಕಂತಿನ ಹಣ ತನ್ನ ಖಾತೆಗೆ ಬರಬೇಕು ಎಂದಾದರೆ, ಕಡ್ಡಾಯವಾಗಿ ಈ ಕೆ ವೈ ಸಿ ಮಾಡಿಸಿಕೊಳ್ಳಲೇಬೇಕು. ಈಗಾಗಲೇ ಸರ್ಕಾರ ಹೊರಡಿಸಿರುವ ಮತ್ತೊಂದು ಸುತ್ತೋಲೆಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಹಣ ಬರಲು ಯಾರ ಹೆಸರಿಗೆ ತೆರೆಯಲಾಗಿದೆಯೋ ಅವರ ಖಾತೆಗೆ ಮಾತ್ರವಲ್ಲದೆ ರೇಷನ್ ಕಾರ್ಡ್ ನಲ್ಲಿ ಹೆಸರು ಇರುವ ಪ್ರತಿಯೊಬ್ಬ ಸದಸ್ಯರು ಕೂಡ ಕೆವೈಸಿ (E-KYC) ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ನಿಮ್ಮ ಬ್ಯಾಂಕ್ ಖಾತೆಗೆ ಇಕೆವೈಸಿ ಆಗಿದ್ಯೋ ಇಲ್ಲವೋ ಎಂದು ಚೆಕ್ ಮಾಡುವುದು ಹೇಗೆ?

  • ಮೊದಲು https://ahara.kar.nic.in/Home/EServices ಈ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಮೂರು ಲೈನ್ ಗಳ ಮೇಲೆ ಕ್ಲಿಕ್ ಮಾಡಿ, ಮೂರನೇ ಆಯ್ಕೆಯಾಗಿರುವ ಈ ಸ್ಥಿತಿಯನ್ನು ಆಯ್ಕೆ ಮಾಡಿ.
  • ಈ ಸ್ಥಿತಿ ಮೇಲೆ ಕ್ಲಿಕ್ (click) ಮಾಡಿದ ನಂತರ, ಹೊಸ ಅಥವಾ ಚಾಲ್ತಿಯಲ್ಲಿರುವ ರೇಷನ್ ಕಾರ್ಡ್ (Ration Card) ತಿದ್ದುಪಡಿ ಸ್ಥಿತಿ ಎನ್ನುವ ಆಯ್ಕೆಯನ್ನು ಕಾಣುತ್ತೀರಿ. ಅದರ ಮೇಲೆ ಕ್ಲಿಕ್ ಮಾಡಿ.
  • ಕ್ಲಿಕ್ ಮಾಡಿದರೆ ನಿಮಗೆ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಮೂರು ಲಿಂಕ್ ಗಳನ್ನು ಕಾಣಬಹುದು. ಆ ಲಿಂಕ್ ಗಳ ಕೆಳಗೆ ಕೊಡಲಾಗಿರುವ ಜಿಲ್ಲೆಗಳನ್ನು ನೋಡಿ ನಿಮ್ಮ ಜಿಲ್ಲೆ ಯಾವುದು ಎಂಬುದನ್ನು ಆಯ್ಕೆ ಮಾಡಿ ಅದರ ಮೇಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ನೀವು ಓಟಿಪಿ ಅಥವಾ ವಿಥೌಟ್ ಓಟಿಪಿ (without OTP) ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು.
  • ವಿಥ್ ಓಟಿಪಿ ಎಂದು ಆಯ್ಕೆ ಮಾಡಿಕೊಳ್ಳಿ. ನೀವು ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ಹಾಕಿದ್ರೆ ನಿಮ್ಮ ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಕಳುಹಿಸಲಾಗುತ್ತದೆ. ನಂತರ ಮೊಬೈಲ್ ಗೆ ಬಂದಿರುವ ಓಟಿಪಿಯನ್ನು ನಮೂದಿಸಿ, ಗೊ (GO) ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  • ಈಗ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಯಾರ ಹೆಸರಿಗೆ ಈಕೆವೈಸಿ ಆಗಿದೆ, ಎಂಬುದನ್ನು ಚೆಕ್ ಮಾಡಲು ಸದಸ್ಯರ ಹೆಸರಲ್ಲಿ ಯಾರ ಹೆಸರು ಬೇಕೋ ಆ ಹೆಸರನ್ನು ಆಯ್ಕೆ ಮಾಡಿ.
  • ಬಳಿಕ ನಿಮ್ಮ ಆಯ್ಕೆಯ ಹೆಸರಿಗೆ, ಉಳಿದ ಸದಸ್ಯರ ಹೆಸರಿಗೆ ಕೆವೈಸಿ ಆಗಿದೆಯೋ ಇಲ್ಲವೋ ಎಂದು ತಿಳಿಯಬಹುದು. ಆಗಿದ್ದರೆ ಎಸ್ ಎನ್ನುವ ಸಂದೇಶ ಕಾಣುತ್ತೀರಿ.

ಈ ರೀತಿ ನೀವು ಕೆವೈಸಿ ಮಾಹಿತಿ ಪಡೆದುಕೊಳ್ಳಿ. ಒಂದು ವೇಳೆ ನಿಮ್ಮ ಕೆವೈಸಿ ಆಗದೇ ಇದ್ದರೆ, ಬ್ಯಾಂಕ್ (Bank) ಗೆ ಹೋಗಿ ಕೂಡಲೇ ಈ ಕೆ ವೈ ಸಿ, ಮಾಡಿಸಿಕೊಳ್ಳಿ. ಒಂದು ವೇಳೆ ಕೆವೈಸಿ ಆಗದೆ ಇದ್ದರೆ, ಮುಂದಿನ ತಿಂಗಳ ಗೃಹ ಲಕ್ಷ್ಮಿ ಹಣ ಫಲಾನುಭವಿ ಮಹಿಳೆಯ ಖಾತೆಗೆ ಬರುವುದಿಲ್ಲ ಎಂದು ತಿಳಿದು ಬಂದಿದೆ.