Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ನಿಧನ

ನವದೆಹಲಿ: ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

92 ವರ್ಷ ವಯಸ್ಸಾಗಿದ್ದ ಅತ್ರೆಯವರು ಪುಣೆಯಲ್ಲಿ ನೆಲೆಸಿದ್ದರು. ಇಂದು ಮನೆಯಲ್ಲಿ ಇರುವ ವೇಳೆ ಹೃದಯಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯದರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಾನೂನು ಪದವೀಧರರಾಗಿದ್ದ ಅತ್ರೆ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಇದರೊಂದಿಗೆ ಅವರಿಗೆ 1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಇನ್ನು ಅತ್ರೆ ಅವರ ಕಟುಂಬದ ಕೆಲವರು ವಿದೇಶಗಳಲ್ಲಿರುವುದರಿಂದ ಅವರು ಬಂದ ನಂತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ತಿಳಿದು ಬಂದಿದೆ.